ರಾಜ್ಯ ಸರ್ಕಾರ 10kg ಅಕ್ಕಿಯ ಬದಲಾಗಿ ಪ್ರತಿ ರೇಷನಕಾರ್ಡ್ ಕುಟುಂಬಕ್ಕೆ ಹಣ ವರ್ಗಾವಣೆ ಮಹತ್ವದ ಆದೇಶ.

ಕರ್ನಾಟಕ ರಾಜ್ಯ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರುವ ಹಾಗೆ ಐದು ಗ್ಯಾರಂಟಿ ಯೋಜನೆ ಅಡಿಯಲ್ಲಿ ಈಗಾಗಲೇ ಒಂದು ಯೋಜನೆಯದ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತವಾದ ಬಸ್ ಸಂಚಾರಕ್ಕೆ ಚಾಲನೆಯನ್ನು ನೀಡಿದ್ದು ಈಗ 5 ಗ್ಯಾರಂಟಿಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ತಲಾ 10 ಕೆಜಿ ಅಕ್ಕಿಯನ್ನು ನೀಡುವ ಆಶ್ವಾಸನೆಯನ್ನು ನೀಡಲಾಗಿತ್ತು ಆದರೆ ಈ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಅಕ್ಕಿಯನ್ನು ನೀಡಲು ನಿರಾಕರಿಸುವಂತಹ ಕಾರಣಕ್ಕಾಗಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರು ಇತರೆ ರಾಜ್ಯಗಳಿಂದ ಅಕ್ಕಿಯನ್ನು ಖರೀದಿಸಲು ಪ್ರಯತ್ನಿಸಿದರು ಇತರೆ ರಾಜ್ಯಗಳಲ್ಲಿ ಸಾಕಷ್ಟು ಪ್ರಮಾಣದ ದಾಸ್ತಾನು ಇಲ್ಲದೆ ಇರುವಂತ ಕಾರಣಕ್ಕಾಗಿ ರಾಜ್ಯ ಸರ್ಕಾರಕ್ಕೆ ಅಕ್ಕಿಯನ್ನು ವಿತರಿಸಲು ಬೇರೆ ರಾಜ್ಯಗಳು ನಿರಾಕರಿಸಿವೇ ಇದರಿಂದ ರಾಜ್ಯ ಸರ್ಕಾರವು ಮುಕ್ತ ಮಾರುಕಟ್ಟೆಯ ಮೂಲಕ ಟೆಂಡರ್ ಕರೆದು ಅಕ್ಕಿ ಪುರೈಕೆ ಯಾಗುವವರೆಗೆ 5 ಕೆಜಿ ಅಕ್ಕಿಯ ಬದಲಿಗೆ ಪ್ರತಿ ಕೆಜಿ ಗೆ ರೂ 34 ನಂತೆ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದೆಂದು ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಗಳ ಮೂಲಕ ತಿಳಿಸಿದ್ದಾರೆ.

Whatsapp Group Join
Telegram channel Join

ಇದನ್ನು ಓದಿ:- ಮುರಾರ್ಜಿ ದೇಸಾಯಿ 6ನೇ ತರಗತಿ ಪ್ರವೇಶ ಮೂರನೇ ಆಯ್ಕೆ ಪಟ್ಟಿ ಪ್ರಕಟ

Share and support
Whatsapp Group Join
Telegram channel Join