ಬೆಂಗಳೂರು 10 : 2022 – 23 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆಯಾಗಿರುವ ಬೆನ್ನಲ್ಲಿ ಸರ್ಕಾರ ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ಮಾಡಲು ಚಿಂತನೆ ನಡೆಸಿದೆ
ಈ ಸಂಬಂಧ ಕಳೆದ ವಾರ ಶಿಕ್ಷಣ ಸಚಿವ ಬಿಸಿ ನಾಗೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರಿಶೀಲನಾ ಸಭೆಯನ್ನು ನಡೆಸಿದ್ದು ಸಭೆಯಲ್ಲಿ ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತರಲು ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ದ್ವಿತೀಯ ಪಿಯುಸಿ ಫಲಿತಾಂಶವನ್ನು ಕೇಂದ್ರೀಯ ಮಂಡಳಿಗಳ ಫಲಿತಾಂಶದೊಂದಿಗೆ ಹೋಲಿಸಿದರೆ ರಾಜ್ಯದ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಮತ್ತು ಅಂಕಗಳ ಸಾಮರ್ಥ್ಯ ಕಡಿಮೆಯಾಗಿದ್ದು ಆದುದರಿಂದ ಪಿಯುಸಿ ಪರೀಕ್ಷೆಯ ಪ್ರತಿ ವಿಷಯದ ಪ್ರಶ್ನೆ ಪತ್ರಿಕೆಯಲ್ಲಿ 15 ರಿಂದ 20 ಅಂಕಗಳ ಬಹು ಆಯ್ಕೆ ಪ್ರಶ್ನೆಗಳನ್ನು ಅಳವಡಿಸಲು ಯೋಜನೆಯನ್ನು ಹಾಕಿಕೊಂಡಿದೆ. ಫಲಿತಾಂಶವನ್ನು ಹೆಚ್ಚಿಸುವುದೇ ಹೊಸ ಯೋಜನೆಯ ಮೂಲ ಉದ್ದೇಶವಾಗಿದೆ ಎನ್ನಲಾಗಿದೆ.
ಪಿಯು ಪರೀಕ್ಷೆಯ ವಿವರಣಾತ್ಮಕ ಉತ್ತರವನ್ನು ಮಾತ್ರ ಒಳಗೊಂಡಿದೆ ಒಂದು ಅಂಕದ ಪ್ರಶ್ನೆಗೂ ವಿವರಣಾತ್ಮಕ ಉತ್ತರವನ್ನು ವಿದ್ಯಾರ್ಥಿಗಳು ಬರೆಯಬೇಕಿದೆ. ಹಾಗಾಗಿ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುತ್ತಿದ್ದು ಪದವಿ ವಿದ್ಯಾಭ್ಯಾಸಕ್ಕೆ ಅರ್ಹತೆ ಪಡೆಯಲು ಪಿಯುಸಿ ಅಂಕವೇ ಭದ್ರಬುನಾದಿಯಾಗಿದೆ. ಹೀಗಾಗಿ ಬಹು ಆಯ್ಕೆ ಪ್ರಶ್ನೆಗಳನ್ನು ಅಳವಡಿಕೆ ಮಾಡಿದರೆ ಫಲಿತಾಂಶ ಉತ್ತಮವಾಗಿರುತ್ತದೆ ಜೊತೆಗೆ ಪದವೀ ದಾಖಲಾತಿ ಕೂಡ ಹೆಚ್ಚುತ್ತದೆ ಎಂಬುದು ಸರ್ಕಾರದ ಚಿಂತನೆಯಾಗಿದೆ.
ಪಿಯು ಇಲಾಖೆಯ ಪರಿಶೀಲನಾ ಸಭೆಯ ಮುಖ್ಯಾಂಶಗಳು
ಪದವಿ ಪೂರ್ವ ಶಿಕ್ಷಣದ ಪರೀಕ್ಷಾ ವ್ಯವಸ್ಥೆಯಲ್ಲಿ ಕೆಲಸದಾರಣೆಗಳನ್ನು ತರಲು ಮುಂದಾಗಿರುವ ಸರ್ಕಾರ 2023-24 ನೇ ಸಾಲಿನಿಂದ ಬಹು ಆಯ್ಕೆ ಮಾದರಿ ಪ್ರಶ್ನೆಗಳನ್ನು (mcq) ಪರಿಚಯಿಸಲು ಚಿಂತನೆ ನಡೆಸಿದೆ.
ಪ್ರಮುಖವಾಗಿ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ದೃಷ್ಟಿಯಿಂದ ಈ ಚಿಂತನೆ ನಡೆಸಲಾಗಿದೆ ಆದರೆ ಬಹು ಆಯ್ಕೆ ಮಾದರಿ ಕೇವಲ ದ್ವಿತೀಯ ಪಿಯುಸಿಗೆ ಮಾತ್ರವಲ್ಲದೆ ಪ್ರಥಮ ಪಿಯು ಪರೀಕ್ಷೆಗೂ ಅಳವಡಿಸಿಕೊಳ್ಳಲು ಆಲೋಚಿಸಲಾಗಿದೆ.
ಈ ಸಂಬಂಧ ಮಂಗಳವಾರ ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ ಸಿ ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ಪಿಯು ಇಲಾಖೆಯ ಪರಿಶೀಲನಾ ಸಭೆಯಲ್ಲಿ ಗಂಭೀರ ಚರ್ಚೆಯಾಗಿದ್ದು ಯಾವುದೇ ಅಂತ್ಯಮ ನಿರ್ಧಾರ ಕೈಗೊಳ್ಳಲಾಗಿಲ್ಲ. ಇನ್ನೂ ಒಂದೆರಡು ಸುತ್ತಿನ ಚರ್ಚೆ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಸಭೆಯಲ್ಲಿ ಹಾಜರಿದ್ದ ಕೆಲವು ಹಿರಿಯ ಅಧಿಕಾರಿಗಳು ಪಿಯು ಫಲಿತಾಂಶ ಉತ್ತಮ ಪಡಿಸಲು ಬಹು ಆಯ್ಕೆ ಮಾದರಿ ಪ್ರಶ್ನೆಗಳನ್ನು ಪರಿಚಯಿಸಲು ಪ್ರಸ್ತಾಪಿಸಿದ್ದಾರೆ. ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ನೆರೆ ರಾಜ್ಯಗಳಾದ ತಮಿಳುನಾಡು ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಪಿಯು ಫಲಿತಾಂಶಕ್ಕೆ ಹೋಲಿಸಿದರೆ ಬಹಳ ಕಡಿಮೆ ಇದೆ. ಕೇಂದ್ರೀಯ ಮಂಡಳಿಗಳ ಫಲಿತಾಂಶ ಸಹ ರಾಜ್ಯ ಪಿಯು ಫಲಿತಾಂಶಕ್ಕೆ ಹೋಲಿಸಿದರೆ ಶೇಕಡಾವಾರು ಭಾರಿ ಏರಿಕೆ ಇರುತ್ತದೆ. ಅಲ್ಲಿ ಫಲಿತಾಂಶ ಉತ್ತಮ ಪಡಿಸಲು ಸಾಕಷ್ಟು ಸುಧಾರಣಾ ಕ್ರಮಗಳನ್ನು ತಂದಿದ್ದಾರೆ. ಸರಳ ವಿಧಾನವನ್ನು ಅಳವಡಿಸಲಾಗಿದೆ
ನೆರೆ ರಾಜ್ಯಗಳ ಪರೀಕ್ಷಾ ಮಾದರಿಯನ್ನು ನಮ್ಮ ರಾಜ್ಯದಲ್ಲೂ ಅಳವಡಿಸಿದರೆ ಹೆಚ್ಚಿನ ಮಕ್ಕಳು ಪಿಯುಸಿ ನಂತರದ ಶಿಕ್ಷಣದಿಂದ ವಂಚಿತರಾಗದೆ ಉನ್ನತ ಶಿಕ್ಷಣಕ್ಕೆ ಹೋಗಲು ಸಾಧ್ಯವಾಗುತ್ತದೆ ಎಂದು ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
for more information visit official website https://pue.karnataka.gov.in/english